ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಮರ್ಣೆ ಗ್ರಾಮದ ಕಾಡುಹೊಳೆ ರೈಸ್‌ಮಿಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮೂಲತಃ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಸಮನಹಳ್ಳಿ ಗ್ರಾಮದವರಾದ ಹನುಮಂತಪ್ಪ (50) ಎಂಬ ವ್ಯಕ್ತಿಯು ಮಾರ್ಚ್ 25 ರಂದು ಸಂಜೆ 7 ಗಂಟೆಯ ಸುಮಾರಿಗೆ ಉಡುಪಿಗೆ ತೆರಳುವುದಾಗಿ ಹೇಳಿ ಹೋದವರು ಇದುವರೆಗೆ ಮನೆಗೆ ವಾಪಾಸು ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಅಜೆಕಾರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ದೂ.ಸಂಖ್ಯೆ: 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08258-231083, ಮೊ.ನಂ: 9480805435 ಹಾಗೂ ಜಿಲ್ಲಾ ಪೊಲೀಸ್ ಕಚೇರಿ ದೂ.ಸಂಖ್ಯೆ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.