ಉಡುಪಿ: ಕಲ್ಯಾಣಪುರ ಬಳಿಯ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ನಡೆದಿದೆ.
ವ್ಯಕ್ತಿ ನದಿಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಆತನನ್ನು ರಕ್ಷಿಸಿದ್ದಾರೆ. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಆ ನಂತರ ಅಂಬಲಪಾಡಿಯಲ್ಲಿರುವ ಆತನ ಮನೆಗೆ ಹಸ್ತಾಂತರಿಸಲಾಯಿತು.
















