ಉಡುಪಿ:ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಾತ್ರಾ ಮಹೋತ್ಸವ : ಮದ್ಯ ಮಾರಾಟ ನಿಷೇಧ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ
ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 13 ರಂದು ಬೆಳಗ್ಗೆ 6 ಗಂಟೆಯಿಂದ ಫೆ. 16 ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲೆ ತಿಳಿಸಲಾದ ದಿನಾಂಕದಂದು ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.