ಮಣಿಪಾಲ ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಮಣಿಪಾಲ: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.) ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ.

2024-25ನೇ ಶೈಕ್ಷಣಿಕ ವರ್ಷದಲ್ಲಿ ಆರಂಭವಾದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ವಾಣಿಜ್ಯ ವಿಭಾಗದಲ್ಲಿ 2025-26ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ.ಗೆ ಪ್ರವೇಶ ಪಡೆಯುವ ಸ್ಥಳೀಯ ಅರ್ಹ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.) ವತಿಯಿಂದ ಉಚಿತ ವಿದ್ಯಾಭ್ಯಾಸ ದೊರೆಯಲಿದೆ.

ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ(ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಶುಲ್ಕ ವಿನಾಯಿತಿ), ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.(ಸಂಪರ್ಕ ಸಂಖ್ಯೆ : 8147454902)

ಪ್ರಸ್ತುತ ಮಣಿಪಾಲ ಜ್ಞಾನಸುಧಾ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಸ್ಟಾಟಿಸ್ಟಿಕ್ಸ್ ಸಂಯೋಜನೆಯಿದ್ದು ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಮತ್ತು ರಾಷ್ಟ್ರೀಯ ಕಾನೂನು ವಿದ್ಯಾಲಯಗಳ ಪ್ರವೇಶ ಪರೀಕ್ಷೆ ಕ್ಲ್ಯಾಟ್ ತರಬೇತಿ ಪ್ರಾರಂಭಗೊಳ್ಳಲಿದೆ.

ಇದಲ್ಲದೆ ಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಪಿ.ಸಿ.ಎಂ.ಬಿ./ಪಿ.ಸಿ.ಎಂ.ಸಿಎಸ್. ಸಂಯೋಜನೆಗಳಿದ್ದು ಪ್ರಥಮ ಪಿ.ಯು.ಸಿ. ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಜೂನ್ ತಿಂಗಳಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ನಡೆಯಲ್ಲಿದ್ದು, ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆಯಲಿದೆ. ಸಂಸ್ಥೆಯಲ್ಲಿ ರಾಷ್ಟçಮಟ್ಟದ ಎಂ.ಬಿ.ಬಿ.ಎಸ್. ಪ್ರವೇಶ ಪರೀಕ್ಷೆ ನೀಟ್, ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಜೆ.ಇ.ಇ.ಮೈನ್, ಕೆ-ಸಿ.ಇ.ಟಿ. ತರಬೇತಿಗಳು ನಡೆಯಲಿದೆ.