ಉಡುಪಿ: ಕಲ್ಯಾಣಪುರ ಸಂತೆಕಟ್ಟೆ ಪ್ರದೇಶದಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ರಸ್ತೆಗೆ ಧರೆಗುರುಳಿದ ಪರಿಣಾಮ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ನಡೆದಿದೆ.
ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುವ ಸರ್ವಿಸ್ ರಸ್ತೆಯ ಮೇಲೆ ಮರ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ ಸುಮಾರು ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.















