ಉಡುಪಿ: ಹುಬ್ಬಳ್ಳಿ ಜಿಲ್ಲೆ ಉನ್ಕಲ್ ಸಾಯಿ ನಗರದ ಅಚ್ಚವ್ವನ ಕಾಲೋನಿಯ ನಿವಾಸಿ ಮೇಘಾ ಕಂಚಿ (20) ಎಂಬ ಯುವತಿಯು ಸೆಪ್ಟಂಬರ್ 7 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಅಜ್ಜರಕಾಡುವಿನಲ್ಲಿರುವ ಸಂಬಂಧಿಕರ ಮನೆಯಿಂದ ಹೋದವರು ವಾಪಾಸು ಮನೆಗೂ ಬಾರದೇ, ಸಂಬAಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.
5 ಅಡಿ 1 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಇನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಉಡುಪಿ ದೂ.ಸಂಖ್ಯೆ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಠಾಣಾ ಪ್ರಭಾರ ಕರ್ತವ್ಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.















