ಉಡುಪಿ: ಉಡುಪಿ ತಾಲೂಕಿನ ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಆಟೋ ರಿಕ್ಷಾ ಚಾಲಕನಾಗಿದ್ದ ಮೊಹಮ್ಮದ್ ಶಾರೀಕ್ (30) ಎಂಬ ವ್ಯಕ್ತಿಯು ಅ.18 ರಂದು ಮನೆ ಬಿಟ್ಟು ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ
ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-
2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.


















