ಉಡುಪಿ: ಕೂಲಿ ಕೆಲಸ ಮಾಡಿಕೊಂಡಿದ್ದ ಉದ್ಯಾವರ ಗ್ರಾಮದ ನಿವಾಸಿ ಲಕ್ಷ್ಮಣ ಛಲವಾದಿ (23) ಎಂಬ ವ್ಯಕ್ತಿಯು ನವೆಂಬರ್ 23 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 1 ಇಂಚು ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ
ಉಡುಪಿ ಪೊಲೀಸ್ ಕಂಟ್ರೋಲ್ ರೂಂ. ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಮೊ.ನಂ: 9480805431 ಹಾಗೂ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2551033, ಮೊ.ನಂ: 9480805449 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

















