ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಪೊಮ್ಮು (57) ಎಂಬ ವ್ಯಕ್ತಿಯು ಜೂನ್ 2 ರಂದು ಆಸ್ಪತ್ರೆಯಿಂದ ಯಾರಿಗೂ ಹೇಳದೇ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.