ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಕಳೆದ ಎರಡು ವರ್ಷಗಳಿಂದ ಉಡುಪಿ ಶ್ರೀಕೃಷ್ಣಮಠದಲ್ಲಿ ಕೆಲಸ ಮಾಡಿಕೊಂಡು, ಬಡಗುಮಾಳಿಗೆಯ ಸಿಬ್ಬಂದಿಯವರ ವಸತಿ ಗೃಹದಲ್ಲಿ ಉಳಿದುಕೊಳ್ಳುತ್ತಿದ್ದ ಹರೀಂದ್ರ ಯು ಆರ್ (48) ಎಂಬ ವ್ಯಕ್ತಿಯು ಮೇ 8 ರಿಂದ ನಾಪತ್ತೆಯಾಗಿರುತ್ತಾರೆ.5 ಅಡಿ 7 ಇಂಚು ಎತ್ತರ, ಅರ್ಧಬೊಕ್ಕ ತಲೆ, ಕೃಷಕಾಯ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.