ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ, ಪ್ರಸಾದ್ ನೇತ್ರಾಲಯ ಮತ್ತು ನೇತ್ರ ಜ್ಯೋತಿ ಟ್ರಸ್ಟ್ ನ ಸಹಭಾಗಿತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸೇವಾ ಸಪ್ತಾಹದ ಅಂಗವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಡೆಸಲಾಯಿತು.
ಸುಮಾರು 400ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡು ಉಚಿತ ಕಣ್ಣಿನ ಪರೀಕ್ಷೆ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷೆ ಕುಯಿಲಾಡಿ ಸುರೇಶ್ ನಾಯಕ್, ಪ್ರಸಾದ್ ನೇತ್ರಾಲಯದ ತಜ್ಞ ಡಾ. ಕೃಷ್ಣಪ್ರಸಾದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಮಹಿಳಾ ಉಸ್ತುವಾರಿ ಗೀತಾಂಜಲಿ ಸುವರ್ಣ, ಶೀಲಾ ಕೆ. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿಕಾ ಶೆಟ್ಟಿ ಮತ್ತು ಪ್ರಮೀಳಾ ಹರೀಶ್, ಆರು ಮಂಡಲಗಳ ಮಹಿಳಾ ಮೋರ್ಚಾದ ಅಧ್ಯಕ್ಷರುಗಳು, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.