MRPL ಘಟಕದಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಕಾರ್ಮಿಕರು ಮೃತ್ಯು.

ಮಂಗಳೂರು: ಮಂಗಳೂರು ರಿಫೈನರಿ ಆಂಡ್ ಪೆಟ್ರೋ ಕೆಮಿಕಲ್ (ಎಂಆರ್ ಪಿಎಲ್) ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.ಪ್ರಯಾಗ್‌ರಾಜ್‌ನ ದೀಪ್ ಚಂದ್ರ (33) ಮತ್ತು ಕೇರಳದ ಬಿಜಿಲ್ ಪ್ರಸಾದ್ (33) ಮೃತಪಟ್ಟ ಕಾರ್ಮಿಕರು.

ಇವರನ್ನು ರಕ್ಷಿಸಲು ಯತ್ನಿಸಿದ ಗದುಗಿನ ವಿನಾಯಕ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ‌ MRPL ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿದ್ದು, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಸೂಚಿಸಿದ್ದಾರೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಮತ್ತು ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಸುರತ್ಕಲ್ ಉಪತಹಶೀಲ್ದಾರ್ ನವೀನ್ ಕುಮಾರ್ ಇದ್ದರು.