udupixpress
Home Trending ಮುಂಬೈಯಿಂದ ಉಡುಪಿಗೆ ಬಂದ ನಾಲ್ವರು ಸಹಿತ ಐದು ಮಂದಿಗೆ ಕೊರೊನಾ ಪಾಸಿಟಿವ್

ಮುಂಬೈಯಿಂದ ಉಡುಪಿಗೆ ಬಂದ ನಾಲ್ವರು ಸಹಿತ ಐದು ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ಐದು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಜಿಲ್ಲೆಯ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಮುಂಬೈಯಿಂದ ಬಂದಿರುವ ನಾಲ್ವರು ಹಾಗೂ ವಿದೇಶದಿಂದ ಬಂದ ಓರ್ವನಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
37, 55 ಹಾಗೂ 31 ವರ್ಷದ ಪುರುಷರು ಹಾಗೂ 48 ಮತ್ತು 34 ವರ್ಷದ ಇಬ್ಬರು ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.

error: Content is protected !!