ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ: ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಚಿತ್ಪಾಡಿಯ ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ಮೇ 16 ಸೋಮವಾರದಂದು ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರಜನಿ ಹೆಬ್ಬಾರ್, ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜೋಕಿಮ್ ವಿಜಯ್ ಡಿ ಸೋಜಾ, ಲಯನ್ಸ್ ಕ್ಲಬ್ ಅಧ್ಯಕ್ಷ ಎಂ. ವಿಠಲ್ ಪೈ, ಕಾರ್ಯದರ್ಶಿ ವಿಷ್ಣುದಾಸ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.