ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಭಂಡಾರ್‌ಕರ‍್ಸ್ ಕಾಲೇಜು ಐ.ಕ್ಯೂ.ಎ.ಸಿ ವಿಭಾಗ, ಕುಂದಾಪುರ ಇವರ ಸಹಕಾರದೊಂದಿಗೆ ಹಾಡಿರೇ ರಾಗಗಳ ತೂಗಿರೇ ದೀಪಗಳ -ಸಂಗೀತ ಗಾಯನ ಕಾರ್ಯಕ್ರಮವು ಆಗಸ್ಟ್ 28 ರಂದು ಬೆಳಗ್ಗೆ 9.30 ಕ್ಕೆ ಕುಂದಾಪುರ ಭಂಡಾರ್ ಕರ‍್ಸ್ ಕಾಲೇಜು ಇಲ್ಲಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದು, ಭಂಡಾರ್‌ಕರ‍್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜು ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಶಾಂತರಾಮ ಪ್ರಭು, ಕಾಲೇಜಿನ ಐ.ಕ್ಯೂ.ಎ.ಸಿ, ಸಂಯೋಜಕ ಸತ್ಯನಾರಾಣ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪಾಡ್ದನದ ಹಾಡುಗಳು, ಹಿಂದೂಸ್ಥಾನಿ ಗಾಯನ, ಸೋಬಾನೆ ಪದಗಳು, ಯಕ್ಷಗಾನ ಪದಗಳು, ಸುಗಮ ಸಂಗೀತ, ದಾಸರ ಪದಗಳು, ರಂಗ ಗೀತೆಗಳು, ವಚನಗಳು ಹೀಗೆ ಮೊದಲಾದ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.













