ಉಡುಪಿ:ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ: ಜಿಲ್ಲಾ ಮಟ್ಟದ ಕಾರ್ಯಾಗಾರ

ಉಡುಪಿ: ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಜಿಲ್ಲಾ ಮಟ್ಟದಕಾರ್ಯಾಗಾರ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಕಾರ್ಯಕ್ರಮವು ಮಾರ್ಚ್ 17 ರಂದು ಬೆಳಿಗ್ಗೆ 10.00 ಗಂಟೆಗೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಕೃಷಿ ಸಚಿವ ಚೆಲುವರಾಯ ಸ್ವಾಮಿ ಉಪಸ್ಥಿತರಿರಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಕರಾವಳಿ ಅಭಿವೃದ್ದಿಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.