ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಕೇಂದ್ರ ಸರ್ಕಾರದ ವತಿಯಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳಿಂದ ವೆಬ್ಸೈಟ್: https://awards.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












