ಉಡುಪಿ: ಬಂಟಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪದಪ್ರದಾನ ಸಮಾರಂಭ

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್ ಕ್ರಾಸ್ ಘಟಕವು ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ದಿನಾಂಕ 27 ಸೆಪ್ಟೆಂಬರ್ 2025ರಂದು ಕಾಲೇಜಿನ ಆವರಣದಲ್ಲಿ ಜರುಗಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿಯ ಖ್ಯಾತ ಸಮಾಜ ಸೇವಕ ಶ್ರೀ ರವಿ ಕಟ್ಪಾಡಿ ಇವರು ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿ ಸಮುದಾಯ ಸೇವೆಯ ಮಹತ್ವದ ಬಗ್ಗೆ ತಿಳಿಸಿದರು ಮತ್ತು ವಿದ್ಯಾರ್ಥಿಗಳು ಸಾಮಾಜಿಕ ಬದ್ಧತೆ ಮತ್ತು
ಸಹಾನುಭೂತಿಯಿಂದ ಸಾಮಾಜಿಕ ಕಾರ್ಯಗಳಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್ ಇವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಬೇರೂರಿರುವ ಜವಾಬ್ದಾರಿ ಮತ್ತು ಸೇವಾ ಮನೋಭಾವದ ಬಗ್ಗೆ ತಿಳಿಸಿದರು.

ಸಂಸ್ಥೆಯ ಶೈಕ್ಷಣಿಕ ಡೀನ್ ಡಾ. ನಾಗರಾಜ ಭಟ್ ಇವರು ಗೌರವ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ವ್ಯಕ್ತಿತ್ವ ಮತ್ತು ವೃತ್ತಿಜೀವನ ಎರಡನ್ನೂ ನಿರ್ಮಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು. ಈ ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು ಜೊತೆಗೆ ಮಾದಕ ದ್ರವ್ಯ ಜಾಗೃತಿ ಪೋಸ್ಟರ್ ತಯಾರಿಕಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು.