ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿ ಜಗದೀಶ್ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧಿಕಾರಿ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.
ಜಗದೀಶ್ ಅವರು ೨೦೦೬ ಉಡುಪಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಸವಣೂರು, ಶಿರಸಿ, ಹಾವೇರಿ ಮೈಸೂರು, ಬೆಂಗಳೂರು ನಲ್ಲಿ ವಿವಿಧ ಹುದ್ದೆಗಳಲ್ಲಿ ಹಾಗೂ ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಮತ್ತು ಹಾಸನ ಮತ್ತು ಕೋಲಾರದಲ್ಲಿ ಜಿಪಂ ಸಿಇಓ ಆಗಿ ಕಾರ್ಯನಿರ್ವಹಿಸಿದ್ದರು.