ಉಡುಪಿ :ಶ್ರೀ ಕೃಷ್ಣ ಮಠದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ
ಸುವರ್ಣಗೋಪುರ ಸಮರ್ಪಣೋತ್ಸವದ ಅಂಗವಾಗಿ ಪರ್ಯಾಯ ಪಲಿಮಾರು ಮಠಾಧೀಶರಾದ
ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಪೇಜಾವರ ಮಠಾಧೀಶರಾದ
ಶ್ರೀವಿಶ್ವೇಶತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ
ಶ್ರೀಪಾದರು,ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು,ಪೇಜಾವರ ಕಿರಿಯ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ
ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು,ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ
ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರುಗಳಿಂದ 108 ರಜತ ಕಲಶಗಳು ಪ್ರತಿಷ್ಠಿತವಾಗಿ ಪೂಜೆಗೊಂಡು ಶ್ರೀಕೃಷ್ಣ ದೇವರಿಗೆ ಬ್ರಹ್ಮಕಲಶಾಭಿಷೇಕ
ನಡೆಯಿತು. ಕಿರಿಯಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.












