ಉಡುಪಿ: ಶ್ರೀ ಉತ್ತರಾದಿ ಮಠದಲ್ಲಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಆರಾಧನೆ ಮತ್ತು ಪುರಂದರ ದಾಸರ ಆರಾಧನೆಯ ಉದ್ಘಾಟನೆ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಮಾತನಾಡಿ, 4 ಶತಮಾನಗಳ ಹಿಂದೆ ವಿದ್ಯಾಧೀಶ ತೀರ್ಥರು ಉಡುಪಿಯಲ್ಲಿ ಚಾತುರ್ಮಾಸ್ಯ ವೃತ ಆಚರಿಸಿ ನ್ಯಾಯಸುಧಾ ಗ್ರಂಥಕ್ಕೆ ವಾಕ್ಯಾರ್ಥ ಚಂದ್ರಿಕಾ ಎಂಬ ಟಿಪ್ಪಣಿ ರಚಿಸಿ ವಿದ್ವತ್ ಸಮಾಜಕ್ಕೆ ಶ್ರೇಷ್ಠ ಕೊಡುಗೆಯನ್ನು ನೀಡಿದ್ದಾರೆ ಎಂದರು.
ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ, ಪೇಜಾವರ ಮಠದ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.
ಬಿ. ಗೋಪಾಲಾಚಾರ್ಯ ಸ್ವಾಗತಿಸಿದರು. ಶಾಖಾ ಮಠದ ವ್ಯವಸ್ಥಾಪಕ ಪ್ರಕಾಶಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.