ಉಡುಪಿ: ಒಮಿಕ್ರಾನ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಉಡುಪಿ ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶದನ್ವಯ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಜ.19ರ ಬೆಳಿಗ್ಗೆ 5ರ ವರೆಗೆ ಜಾರಿಯಲ್ಲಿರುತ್ತದೆ. ಹಾಗೆ ವಿಕೇಂಡ್ ಕರ್ಫ್ಯೂ ಕೂಡ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂವನ್ನು ರದ್ದುಪಡಿಸಿದ್ದಾರೆ ಎಂಬ ವಿಡಿಯೋ ತುಣುಕು ಹರಿಯಬಿಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿರುವ ಘಟನೆ ಸ್ಪಷ್ಟನೆ ನೀಡಿದ್ದಾರೆ. ಇದು ಸುಳ್ಳು ವದಂತಿಯಾಗಿದ್ದು, ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ಪಷ್ಟಪಡಿಸಿದ್ದಾರೆ.