ಉಡುಪಿ: ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ 1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು https://ssp.postmatric.karnataka.gov.in ನಲ್ಲಿ ಮಾರ್ಚ್ 5 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ https://ssp.postmatric.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಅಥವಾ ಇಲಾಖಾ ಸಹಾಯವಾಣಿ 8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಶದ ಸಹಾಯವಾಣಿ 1902 ಗೆ ಕರೆ ಮಾಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
















