ಉಡುಪಿ:ಅಂಗನವಾಡಿ ಹುದ್ದೆ ಆಯ್ಕೆ ಪ್ರಕ್ರಿಯೆ: ಆಕ್ಷೇಪಣೆ ಆಹ್ವಾನ

ಉಡುಪಿ: ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಶಿಶು ಅಭಿವೃದ್ದಿ ಯೋಜನಾಧಿಕಾರಿ ಹಾಗೂ ಉಪನಿರ್ದೇಶಕರ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 12 ರ ಒಳಗಾಗಿ ಆಯಾ ಶಿಶು ಅಭಿವೃದ್ದಿ ಯೋಜನಾಧಿಕಾರಿ ಅಥವಾ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು https://udupi.nic.in ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವೀಕ್ಷಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.