ಉಡುಪಿ: ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಸಾಗರ ಪರಿಕ್ರಮ (ಹಂತ-4) ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮವು ಮಾರ್ಚ್ 19 ರಂದು ಬೆಳಗ್ಗೆ 10 ಗಂಟೆಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆಯಲಿದೆ.
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರಷೋತ್ತಮ ರೂಪಾಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ. ಸಂಜೀವ ಕುಮಾರ್ ಬಲ್ಯಾನ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ತಂತ್ರಜ್ಞಾನ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಕೆ.ರಘುಪತಿ ಭಟ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಂಗಳೂರು ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿಯಮಿತ ಅಧ್ಯಕ್ಷ ಯಶ್ಪಾಲ್ ಎ ಸುವರ್ಣ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಕೇಂದ್ರ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಜತೀಂದ್ರನಾಥ್ ಸ್ವೆನ್ ಹಾಗೂ ಮತ್ತಿತರರು ಭಾಗವಹಿಸಲಿರುವರು.