ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರದ ಹನೆಹಳ್ಳಿ ಗ್ರಾಮದಲ್ಲಿ ವಾಸವಿದ್ದ ಬಚ್ಚಿ
ಪೂಜಾರ್ತಿ (69) ಎಂಬ ವೃದ್ಧೆಯು 2019 ರಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.
5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ
ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2561044, ಪಿ.ಎಸ್.ಐ
ಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ವೃತ್ತ ಕಚೇರಿ ದೂ.ಸಂಖ್ಯೆ: 0820-2561966 ಹಾಗೂ ಸಿ.ಪಿ.ಐ ಮೊ.ನಂ:
9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.












