ಉಡುಪಿ: ತಲ್ಲೂರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಇವರ ಸಹಯೋಗದಲ್ಲಿ ಜಾನಪದ ಸ್ಪರ್ಧೆ- 2023 ಕಾರ್ಯಕ್ರಮವು ಇದೇ ಬರುವ ಜೂನ್ 18ರಂದು ಬೆಳಿಗ್ಗೆ 9.30ಕ್ಕೆ ಅಂಬಾಗಿಲಿನ ಅಮೃತ ಗಾರ್ಡನ್‌ನಲ್ಲಿ ನಡೆಯಲಿದೆ.
ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಹಾಗೂ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಾನಪದ ಕಲಾವಿದ ರವಿ ಪಾಣಾರ ಪಡ್ಡಮ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು, 18-50 ವರ್ಷ ವಯೋಮಿತಿಯೊಳಗಿನವರಿಗೆ ಗಾದೆ/ ಒಗಟು ಹೇಳುವ ಸ್ಪರ್ಧೆ, ಜಾನಪದ ಗೀತೆ ಸ್ಪರ್ಧೆ (ವೈಯಕ್ತಿಕ) ಜಾನಪದ ಗೀತೆ (ಸಮೂಹ), ಜಾನಪದ ವಾದ್ಯ (ಸಮೂಹ) ಜಾನಪದ ನೃತ್ಯ ಸ್ಪರ್ಧೆ (ಸಾಮೂಹ) ನಡೆಯಲಿವೆ. ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು ಎಂದರು.
ಅದೇ ದಿನ ಸಂಜೆ 4 ಗಂಟೆಗೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ ಸುನೀಲ್ ಸಾಲ್ಯಾನ್ ಕಡೆಕಾರ್ ಅವರಿಗೆ ಸೇವಾರತ್ನ ಜಾನಪದ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಅಂಬಲಪಾಡಿ ಶ್ರೀ ಮಹಾಕಾಳಿ ಜನಾರ್ದನ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ.ಬೀ ವಿಜಯ ಬಲ್ಲಾಳ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಹಿರಿಯ ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ, ಗಾಂಧಿಯನ್ ಸೆಂಟರ್ ಫಾರ್ ಫಿಲೋಸಾಫಿಕಲ್ ಆರ್ಟ್ಸ್ & ಸೈನ್ಸ್ ಮಾಹೆ ಮಣಿಪಾಲದ ನಿರ್ದೇಶಕ ಪ್ರೊ. ವರದೇಶ ಹಿರೇಗಂಗೆ, ಕನ್ನಡ & ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಸಕ್ತ ತಂಡಗಳು ತಮ್ಮ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 17ರ ಸಂಜೆ 6ಗಂಟೆಯ ಒಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9008755731 ಯನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪರಿಷತ್ ನ ಉಡುಪಿ ತಾಲೂಕು ಅಧ್ಯಕ್ಷ ಸುನಿಲ್‌ಕುಮಾರ್ ಶೆಟ್ಟಿ, ಸದಸ್ಯರಾದ ರಾಧಾಕೃಷ್ಣ ಶೆಟ್ಟಿ ಹಾಗೂ ಶೇಖರ್ ಕಲ್ಮಾಡಿ ಉಪಸ್ಥಿತರಿದ್ದರು.












