ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಸೋಂಕು ಇನ್ನೂರರ ಗಡಿದಾಟಿದೆ, ಇಂದು ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿದ್ದು ರಾಜ್ಯದಲ್ಲೇ ಇದೀಗ ಉಡುಪಿ ಮೊದಲ ಸ್ಥಾನದಲ್ಲಿದೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ ಎಂದಿದ್ದಾರೆ. ಸೋಂಕು ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದೆ ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಂಡಿದೆ.