ಉಡುಪಿ:ಒಂದು ದಿನದ ಉದ್ಯಮಶೀಲತಾ ತಿಳಿವಳಿಕೆ ಶಿಬಿರ

udupixpress

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಉಡುಪಿ ಹಾಗೂ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ (ರಿ.) ಕುಂಜಿಬೆಟ್ಟು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ 18 ವರ್ಷದಿಂದ 45 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “ಒಂದು ದಿನದ ಉದ್ಯವiಶೀಲತಾ ತಿಳಿವಳಿಕೆ ಶಿಬಿರ”ವನ್ನು ನವೆಂಬರ್ 2 ರಂದು ನಗರದ ಕುಂಜಿಬೆಟ್ಟುವಿನ ತುಳಜಭವಾನಿ ಸಮುದಾಯ ಭವನದಲ್ಲಿ
ಆಯೋಜಿಸಲಾಗಿದೆ.

ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ,
ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ಕರ್ನಾಟಕ
ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಮಣಿಪಾಲ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ಕಛೇರಿ, ಒಂದನೇ ಮಹಡಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಅಲೆವೂರು ರೋಡ್,
ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8217530146 ಹಾಗೂ 9844616316 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್
ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.