ಉಡುಪಿ: ಕೇಂದ್ರ ಸರ್ಕಾರದ ಜನೋಪಯೋಗಿ ಯೋಜನೆಯಾದ ಜನೌಷಧಿ ಕೇಂದ್ರವನ್ನು ಬೆಳಿಗ್ಗೆ 9 ಗಂಟೆಯ ಬದಲು ಬೆಳಿಗ್ಗೆ 7 ಗಂಟೆಗೆ ತೆರೆಯುವಂತೆ ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನೌಷಧಿ ಕೇಂದ್ರಗಳ ಮೇಲ್ವಿಚಾರಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜನೌಷಧ ಕೇಂದ್ರಗಳನ್ನು ಬೆಳಿಗ್ಗೆ 9 ಗಂಟೆಯ ಬಳಿಕ ತೆರೆಯುವುದರಿಂದ ಅನೇಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದಿವೆ. ಆದ್ದರಿಂದ ಏಪ್ರಿಲ್ 14ರಿಂದ ಬೆಳಿಗ್ಗೆ 7 ಗಂಟೆಗೆ ತೆರೆಯುವಂತೆ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34 ಹಾಗೂ ಉಡುಪಿ ಜಿಲ್ಲೆಯಲ್ಲಿ 27 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಮಯ ಹೊಂದಾಣಿಕೆಯಿಂದ ಜನಸಾಮಾನ್ಯರಿಗೆ ಕಡಿಮೆ ವೆಚ್ಚದಲ್ಲಿ ಔಷಧ ಸಿಗಲು ಅನುಕೂಲವಾಗಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.