ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಮಠದಬೆಟ್ಟು ರೋಡ್ ನ ಆರ್.ಎಸ್.ಬಿ. ವಿಂಡ್ಸರ್ ಪ್ರಥಮ ಮಹಡಿಯಲ್ಲಿ ಇಂದು ಬೆಳಿಗ್ಗೆ 9ಗಂಟೆಗೆ ಪಂಚಮಿ ಸೌಹಾರ್ದ ಸಹಕಾರಿ ನಿ. ಇದರ ಸುಸಜ್ಜಿತ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ನಡೆಯಲಿದೆ.
ಉಡುಪಿ ಶಾಸಕ ಕೆ. ರಘುಪತಿ ಭಟ್ ನೂತನ ಕಚೇರಿಯನ್ನು ಉದ್ಘಾಟಿಸುವರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ, ಮಣಿಪಾಲ ಆರ್ ಎಸ್ ಬಿ ಸಂಘದ ಅಧ್ಯಕ್ಷ ಎಂ. ಗೋಕುಲದಾಸ್ ನಾಯಕ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಎಸ್.ಕೆ.ಮಂಜುನಾಥ್, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಭಾಸ್ಕರ್ ಕಾಮತ್, ಉಡುಪಿ ಗೀತಾಂಜಲಿ ಸಿಲ್ಕ್ಸ್ ಪಾಲುದಾರ ರಾಮಕೃಷ್ಣ ನಾಯಕ್, ಉದ್ಯಮಿಗಳಾದ ವಾಸುದೇವ ನಾಯಕ್, ವಸಂತ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾತಿ ಪ್ರಭು ಹಾಗೂ ಅಧ್ಯಕ್ಷ ಸತ್ಯಪ್ರಸಾದ್ ಶೆಣೈ ಬ್ರಹ್ಮಾವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.