ಉಡುಪಿ: ಇಲ್ಲಿನ ಪಿಪಿಸಿ ರಸ್ತೆಯ ಟಿಎಪಿಸಿಎಂಎಸ್ ಕಟ್ಟಡದ ಎರಡನೇ ಮಹಡಿಯಲ್ಲಿರುವ ನವೀಕೃತಗೊಂಡ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಕಚೇರಿಯನ್ನು ದ.ಕ. ಜಿಲ್ಲಾ ಕೇಂದ್ರ
ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎ.ಎನ್. ರಾಜೇಂದ್ರ ಕುಮಾರ್ ಮಂಗಳವಾರ
ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರುಗಳಾದ ಡಾ. ದೇವಿಪ್ರಸಾದ್ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ. ನಾಯಕ್, ಸಹಕಾರಿಗಳಾದ ಕಟಪಾಡಿ ಶಂಕರ ಪೂಜಾರಿ, ವೈ. ಸುಧೀರ್ ಕುಮಾರ್, ಹರೀಶ್ ಕಿಣಿ, ಗೋಪಿನಾಥ್, ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪಿ. ಪುರುಷೋತ್ತಮ ಮೊದಲಾದವರು ಉಪಸ್ಥಿತರಿದ್ದರು.