ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಕೆಳಪರ್ಕಳ ಭಾಗದಲ್ಲಿ ರಸ್ತೆಯ ದುರಾವಸ್ಥೆಯನ್ನು ಖಂಡಿಸಿ, ಕೂಡಲೇ ಅದನ್ನು ಸಂಚಾರ ಯೋಗ್ಯವನ್ನಾಗಿ ಮಾಡುವಂತೆ ಆಗ್ರಹಿಸಿ ಪರ್ಕಳ ರಸ್ತೆ ಹೋರಾಟ ಸಮಿತಿಯ ವತಿಯಿಂದ ಜು.6ರಂದು ಸಾರ್ವಜನಿಕರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ.
ಪರ್ಕಳ ಪ್ರದೇಶದ ರಸ್ತೆಗಳ ಹದಗೆಟ್ಟ ಸ್ಥಿತಿಯಿಂದ ಸಾರ್ವಜನಿಕರು ತೀವ್ರ ವಾದ ತೊಂದರೆ ಅನುಭವಿಸು ತಿದ್ದಾರೆ. ಸತತ ಮಳೆಯ ಕಾರಣ ದಿನದಿಂದ ದಿನಕ್ಕೆ ರಸ್ತೆ ಪರಿಸ್ಥಿತಿ ಹದಗೆಡುತ್ತಿದ್ದು, ಸಂಚಾರಕ್ಕೆ ಬಳಸಲು ಅಸಮರ್ಥ ವಾಗಿದೆ.ಇದರಿಂದ ಅಪಘಾತಗಳು ಹೆಚ್ಚಾಗುತ್ತಿದೆ ಹಾಗೂ ದಿನನಿತ್ಯ ಸಂಚರಿಸು ವವರಿಗೆ ಅನೇಕ ತೊಂದರೆಗಳು ಎದುರಾಗುತ್ತಿವೆ ಎಂದು ಸ್ಥಳೀಯರು, ರಸ್ತೆ ಬಳಕೆದಾರರು, ವಾಹನ ಚಾಲಕರು ತಿಳಿಸಿದ್ದಾರೆ.












