ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಮುಂಜಾನೆ 5 ಗಂಟೆಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.
 ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶ್ರೀಗಳ ಈಗಿನ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆಯಲ್ಲಿದ್ದಾರೆ. ಅವರಿಗೆ ನ್ಯುಮೋನಿಯಾಗೆ ಚಿಕಿತ್ಸೆ ನೀಡುತ್ತಾ, ಪ್ರತಿರೋಧಕ ಔಷಧಿ ಮತ್ತು ಸಹಾಯಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.