ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಬೊಮ್ಮನಪಾದೆ ನಿವಾಸಿ ಪ್ರಸನ್ನ (43) ಎಂಬ ವ್ಯಕ್ತಿಯು 2021 ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.