ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿಯ ಬಾರ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಂಜುನಾಥ ಮನೋಹರ ಪೊಳೆ (31) ಎಂಬ ವ್ಯಕ್ತಿಯು ಮೇ 9 ರಿಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.