ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಸುಮಾರು 19 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಅಲೆವೂರಿನ ನೆಹರು ನಗರದಲ್ಲಿ ವಾಸವಿದ್ದ ಕುಮಾರ ಕೃಷ್ಣ (47) ಎಂಬ ವ್ಯಕ್ತಿಯು ಸೆಪ್ಟಂಬರ್ 13 ರಂದು ಬೆಳಗ್ಗೆ 10.30 ರ ಸುಮಾರಿಗೆ ಅಲೆವೂರು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 10 ಇಂಚು ಎತ್ತರ, ಬಿಳಿ ಮಿಶ್ರಿತ ಗೋಧಿ ಬಣ್ಣ, ಕೋಲುಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕರು ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475, 8277988945 ಹಾಗೂ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಕಚೇರಿ ಪ್ರಕಟಣೆ ತಿಳಿಸಿದೆ.