ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಮುಂಬೈನಲ್ಲಿ ಸಂಬಂಧಿಕರೊಂದಿಗೆ ವಾಸವಿದ್ದ ಯತಿರಾಜ (53) ಅವರು ತಂದೆ-ತಾಯಿ ಮೃತಪಟ್ಟ ಬಳಿಕ ಬೆಂಗಳೂರಿನಲ್ಲಿ ವಾಸವಿರುವುದಾಗಿ ಕರೆ ಮಾಡಿ ಮನೆಯವರಿಗೆ ತಿಳಿಸಿದ್ದು, ಆಗಾಗ ಫೋನ್ ಕರೆ ಮಾಡುತ್ತಿದ್ದು ಇತ್ತೀಚೆಗೆ 4-5 ತಿಂಗಳಿನಿಂದ ದೂರವಾಣಿ ಸಂಪರ್ಕಕ್ಕೆ ಸಿಕ್ಕಿರುವುದಿಲ್ಲ. ಸಂಬಂಧಿಕರಲ್ಲಿ ಹಾಗೂ ಬೆಂಗಳೂರಿನಲ್ಲಿ ಗುರುತು ಪರಿಚಯದವರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ದೊರೆತಿರುವುದಿಲ್ಲ.
5 ಅಡಿ 4 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿರುವ ಸದ್ರಿ ವ್ತಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡಕ ಪೊಲೀಸ್ ಠಾಣೆ ಪಿ.ಎಸ್.ಐ ಮೊ.ನಂ: 9480805452, ಬ್ರಹ್ಮಾವರ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡಕ ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.