ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ರಮಾನಾಥ ನಾಯಕ್ (57) ಎಂಬ ವ್ಯಕ್ತಿಯು 2021 ಮಾರ್ಚ್ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 10 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.