ಉಡುಪಿ:ಗಾರೆ ಕೆಲಸಗಾರ ನಾಪತ್ತೆ

ಉಡುಪಿ: ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಬಸಪ್ಪ ಛಲವಾದಿ
(50) ಎಂಬ ವ್ಯಕ್ತಿಯು ಜುಲೈ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ
ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಅಗಲ ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ
ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475, 8277988945 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.