ಉಡುಪಿ: ಪೊದಾರ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ಯೋಧ,ರೈಲ್ವೇ ಯಾತ್ರಿಕರ ಸಂಘದ ಅಧ್ಯಕ್ಷರಾದ ಆರ್.ಎಲ್.ಡಾಯಸ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಎಮ್.ಎಸ್.ಹಿರೇಮಠ ಸ್ವಾತಂತ್ರ್ಯೋತ್ಸವದ ಕುರಿತು ಮಾಹಿತಿ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವಿದ್ಯಾರ್ಥಿ ಪ್ರಥಮ್ ನಿರೂಪಿಸಿದರು. ವಿದ್ಯಾರ್ಥಿಗಳಾದ ರಶಾದ್ ಸ್ವಾಗತಿಸಿ, ಸುಪ್ರೀತ್ ವಂದಿಸಿದರು.












