ಉಡುಪಿ: ಪೊದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರಾದ ಎಮ್.ಎಸ್.ಹಿರೇಮಠ ಉದ್ಘಾಟಿಸಿದರು.
ಶಾಲಾ ಮಕ್ಕಳು ಶಿಕ್ಷಕ ದಿನಾಚರಣೆಯ ಮಹತ್ವದ ಬಗ್ಗೆ ಭಾಷಣ ಮಾಡಿದರು.
ಶಿಕ್ಷಕರ ಪರವಾಗಿ ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯಿಯಾದ ಲಕ್ಷ್ಮೀ ಕದೆರೇಶ್ವರನ್ ಶಿಕ್ಷಕರ ದಿನಚರಣೆಯ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ವಿದ್ಯಾರ್ಥಿ ರಶಾದ್ ಸ್ವಾಗತಿಸಿದರು. ವಿವಿಧ ಸಾಂಸೃತಿಕ ಕಾರ್ಯಕ್ರಮಗಳು ನಡೆದವು.ಶಿಕ್ಷಕರಿಗಾಗಿ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ತನು ಶೆಟ್ಟಿ ನಿರೂಪಿಸಿದರು.