ಉಡುಪಿ: ಮಗನಿಗೆ ಸರಿಯಾದ ಉದ್ಯೋಗ ಇಲ್ಲದ ಚಿಂತೆಯಲ್ಲಿ ತಾಯಿ ವಿಷ ಸೇವಿಸಿ ಆತ್ಮಹತ್ಯೆ

ಉಡುಪಿ: ಮಗನಿಗೆ ಸರಿಯಾದ ಉದ್ಯೋಗ ಇಲ್ಲದ ಚಿಂತೆಯಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯ ಭಾಸ್ಕರ ಎಂಬವರ ಪತ್ನಿ ಲತಾ(53) ಎಂದು ಗುರುತಿಸಲಾಗಿದೆ.

ಆ.8ರಂದು ಥಾಣೆಯ ಮನೆಯಿಂದ ಇವರು ನಾಪತ್ತೆಯಾಗಿದ್ದು, ಈ ಬಗ್ಗೆ ಮುಂಬಯಿ ವೊಡವುಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ.12ರಂದು ಇವರು ವಿಷ ಸೇವಿಸಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಗ್ಗೆ ಪತಿಗೆ ಮಾಹಿತಿ ಬಂದಿದ್ದು, ಆ.30ರಂದು ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರು ತನ್ನ ಮಗನಿಗೆ ಸರಿಯಾದ ಉದ್ಯೋಗ ಇಲ್ಲದೇ ಇದ್ದ ಬಗ್ಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.