ಉಡುಪಿ:ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ನಾಗರೀಕ ಸೇವಾ ಸಮಾಜದಿಂದ ಒಬ್ಬ ಸದಸ್ಯರನ್ನು ನೇಮಕ
ಮಾಡಬೇಕಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಬಯೋ ಡಾಟಾ (ವೈಯಕ್ತಿಕ ಮಾಹಿತಿ) ಹಾಗೂ ಸಹಮತಿ ಪತ್ರ ಸಹಿತ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಆಡಳಿತ ಶಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ:0820-2574925 ಅನ್ನು ಸಂಪಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












