ಉಡುಪಿ:ಪ್ರೌಢಶಾಲಾ ಸಹ ಶಿಕ್ಷಕರುಗಳ ಉಪನ್ಯಾಸಕರ ಹುದ್ದೆಗೆ ಭಡ್ತಿ :ಆಕ್ಷೇಪಣೆ ಆಹ್ವಾನ

ಉಡುಪಿ: ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ https://WWW.SCHOOLEDUCATION.KARNATAKA.GOV.IN ನಲ್ಲಿ ಪ್ರಕಟಿಸಲಾಗಿದ್ದು, ಸಂಬಂಧಿಸಿದ ಶಿಕ್ಷಕರುಗಳು ಪರಿಶೀಲಿಸಿ, ಯಾವುದೇ ಆಕ್ಷೇಪಣೆ ಇದ್ದಲ್ಲಿ ಆಕ್ಷೇಪಣಾ ನಮೂನೆ ಯಲ್ಲಿ ಮಾಹಿತಿಯನ್ನು ಪ್ರಿಂಟ್ ಮಾಡಿಸಿ, ಪೂರಕ ದಾಖಲೆಗಳೊಂದಿಗೆ ತ್ರಿಪ್ರತಿಯಲ್ಲಿ ಮೇ 8 ರ ಒಳಗಾಗಿ ಸಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಆಡಳಿತ) ಕಚೇರಿ ಪ್ರಕಟಣೆ ತಿಳಿಸಿದೆ.