ಉಡುಪಿ: ಉಡುಪಿ ನಗರ ಠಾಣೆ ಪಿಎಸ್‌ಐ ಅನಂತ ಪದ್ಮನಾಭ ಹಾಗೂ ಹೆಡ್ ಕಾನ್‌ಸ್ಟೆಬಲ್ ಮೇಲೆ ಕರ್ತವ್ಯ ಲೋಪದ ಆರೋಪ ಹೊರೆಸಿ ಅಮಾನತು ಮಾಡಿರುವುದು ಖಂಡನೀಯ. ಎಸ್ಪಿ ಈ ಬಗ್ಗೆ ಏಕಪಕ್ಷೀಯವಾಗಿ ಕ್ರಮ ತೆಗೆದುಕೊಂಡಿದ್ದು, ಇದಕ್ಕೆ ಉಡುಪಿ ಜಿಲ್ಲಾ ಶ್ರೀರಾಮಸೇನೆ ತೀವ್ರ ಖಂಡನೆ ವ್ಯಕ್ತಪಡಿಸಿದೆ ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ತಿಳಿಸಿದ್ದಾರೆ.
ಅಮಾನತು ಆದೇಶವನ್ನು 48 ಗಂಟೆಯೊಳಗೆ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.