ಉಡುಪಿ:ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲಿರುವ ವಾಹನಗಳ ಹಳೆ ಬಿಡಿಭಾಗಗಳು ಮತ್ತು ನಿರುಪಯುಕ್ತ ಇತರೆ ವಸ್ತುಗಳನ್ನು ಜನವರಿ 12 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ಕರ್ನಾಟಕ ಲೋಕಾಯುಕ್ತ ಕಛೇರಿಯ ನೆಲಮಹಡಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಆಸಕ್ತರು ಸದರಿ ಹರಾಜಿನಲ್ಲಿ ಭಾಗವಹಿಸಬಹುದಾಗಿದ್ದು, ಯಶಸ್ವೀ ಖರೀದಿದಾರರು ಹಣವನ್ನು ನಗದಾಗಿಯೇ ಪಾವತಿಸಿ, ಅವರ ಸ್ವಂತ ಖರ್ಚಿನಲ್ಲಿ ತೆಗೆದುಕೊಂಡು ಹೋಗಬೇಕು. ಹರಾಜಿನ ಕುರಿತ ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2958881 ಅನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
















