ಕೊಪ್ಪಳ: ಕೊಪ್ಪಳ ಜಿಲ್ಲೆ ಕೊಕನೂರು ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ಹೃದಯಾಘಾತದಿಂದ 18 ವರ್ಷದ ಯುವತಿ ಬಲಿಯಾದ ಘಟನೆ ನಡೆದಿದೆ.
ಮೃತ ಯುವತಿ ಕಾವ್ಯಾ ಚಲವಾದಿ (18). ಕಳೆದ 2 ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಂಗಳವಾರ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಹೃದಯಾಘಾತದಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ. ಒಂದು ತಿಂಗಳ ಹಿಂದೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನ 22 ವರ್ಷದ ಬಿಕಾಂ ವಿದ್ಯಾರ್ಥಿನಿ ದಿಶಾ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಕೆಲ ತಿಂಗಳ ಹಿಂದೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ (12) ಎಂಬಾಕೆ ಶಾಲೆಗೆ ತೆರಳುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಳು.















