ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಡಿ.21 ರಂದು ಬೆಳಿಗ್ಗೆ 8.00 ಗಂಟೆಗೆ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

















