ಉಡುಪಿ, ಪುತ್ತೂರು: ಡಿಪ್ಲೋಮಾ ವಿದ್ಯಾರ್ಥಿನಿ ನಾಪತ್ತೆ

ಉಡುಪಿ ಮಾ.19: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ರಾಜೀವ ನಗರದ ಬಾಡಿಗೆ ಮನೆಯ ನಿವಾಸಿ ಜಾನಕಿ ಮಹಾದೇವರ ಮಗಳು ಸಂಪದಾ (21) ಎಂಬುವವರು ಉಡುಪಿ ಪ್ರಸಾದ್ ನೇತ್ರಾಲಯದಲ್ಲಿ ಅಂತಿಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿನಿಯಾಗಿದ್ದು, ಮಾರ್ಚ್ 14 ರಂದು ಬೆಳಗ್ಗೆ 11.30 ಕ್ಕೆ ಮನೆಯಿಂದ ಹೋದವಳು ಇದುವರೆಗೆ ಮನೆಗೆ ಬಾರದೇ ಕಾಣೆಯಾಗಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.